12:05 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರೋಪಿಯನ್ನು ಸಂಘಟನೆಯಿಂದ ಹೊರ ದಬ್ಬಿದ ಬಜರಂಗ ದಳ

15/01/2023, 18:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಿಜೆಪಿ ಕಾರ್ಯಕರ್ತ ಎನ್ನಲಾದ ನಿತೇಶ್ ಎಂಬಾತನನ್ನು ಬಜರಂಗ ದಳ ಸಂಘಟನೆಯಿಂದ ಹೊರ ಹಾಕಲಾಗಿದೆ.

ನಿತೇಶ್ ನ ಕಿರುಕುಳಕ್ಕೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ನಡೆಸಿದ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ನಿತೇಶ್ ನನ್ನು ಜಜರಂಗ ದಳದಿಂದ ಹೊರ ಹಾಕಲಾಗಿದೆ. ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನಿತೇಶ್ ಗೂ ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಘಟನೆ ಈಗ ಹೇಳಿಕೊಂಡಿದೆ.

ನಿತೇಶ್ ಕಿರುಕುಳಕ್ಕೆ ಕ್ರಿಮಿನಾಶಕ ಸೇವಿಸಿ ವಿದ್ಯಾರ್ಥಿ ನಿ ದೀಪ್ತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಆಕೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಇದಕ್ಕೆ ಮುನ್ನ ಆಸ್ಪತ್ರೆಯಲ್ಲೇ ಲಿಖಿತ ಹೇಳಿಕೆ ದಾಖಲಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು