ಇತ್ತೀಚಿನ ಸುದ್ದಿ
ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಆರೋಪಿ ಬಂಧನ
23/11/2022, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ.
ಸಂಬಂಧಿಕನಾದ ಸುಂದರೇಶ್( 36) ಎಂಬಾತ ಬಾಲಕಿಯ ಮೇಲೆ
ಲೈಂಗಿಕ ದೌರ್ಜನ್ಯ ವೆಸಗಿದ್ದ. ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.