9:23 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಏ. 20ಕ್ಕೆ ನಾಮಪತ್ರ ಸಲ್ಲಿಕೆ; ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ: ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಮನವಿ

18/04/2023, 12:16

ಬಂಟ್ವಾಳ(reporterkarnataka.com):
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿನಂತಿಸಿದರು.
ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಪಾದಯಾತ್ರೆಯ ಮೂಲಕ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ವಿವರಿಸಿದರು.


ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ತಾಲೂಕು ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ಕಟ್ಟಡಗಳು ತಮ್ಮ ಅವಧಿಯಲ್ಲಿ ನಿರ್ಮಿಸಲ್ಪಟ್ಟವು. ಮಿನಿ ವಿಧಾನಸೌಧ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಅಂಬೇಡ್ಕರ್ ಭವನ ಸಹಿತ ಹಲವು ಕಟ್ಟಡಗಳು, ಪುರಸಭೆ ವ್ಯಾಪ್ತಿಯ ಬಹುತೇಕ ರಸ್ತೆಗಳು ತಮ್ಮ ಅವಧಿಯಲ್ಲಿ ಅಭಿವೃದ್ಧಿ ಪಡಿಸಲ್ಪಟ್ಟಿವೆ. ತಾವು ಆರಂಭಿಸಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಇನ್ನೂ ಪೂರ್ಣಗೊಳ್ಳದೆ ನಿರ್ಲಕ್ಷಿಸಲ್ಪಟ್ಟಿವೆ. ಈ ಬಾರಿ ಅವುಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ಪ್ರಮುಖರಾದ ಪದ್ಮಶೇಖರ್ ಜೈನ್, ಸುರೇಶ್ ಬಿ. ನಾವೂರು, ಮಾಯಿಲಪ್ಪ ಸಾಲ್ಯಾನ್, ಸಂಜೀವ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ನಾರಾಯಣ ನಾಯ್ಕ, ಅಬ್ಬಾಸ್ ಅಲಿ, ಪುರಸಭೆ ಅಧ್ಯಕ್ಷ ಮುಹಮ್ಮದ್ ಶರೀಫ್, ಜಯಂತಿ ಪೂಜಾರಿ, ಪುರಸಭೆಸದಸ್ಯರುಗಳಾದ ವಾಸು ಪೂಜಾರಿ, ಸಿದ್ದೀಕ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು