6:52 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದಲ್ಲಿ ಮುಳುಗಿದ ಸ್ಥಿತಿಯಲ್ಲಿ ನಿಗೂಢ ದ್ವೀಪ ಪತ್ತೆ: 8 ಕಿ.ಮೀ ಉದ್ದ, 3.5 ಕಿ.ಮೀ ಅಗಲವಿದೆಯಂತೆ!!

18/06/2021, 07:18

ತಿರುವನಂತಪುರ(reporterkarnataka news):

ಸಮುದ್ರದೊಳಗೆ ಒಂದು ನಿಗೂಢ ದ್ವೀಪ ಪತ್ತೆಯಾಗಿದೆ. ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೂಗಲ್ ನಕ್ಷೆ ಇದನ್ನು ಬಹಿರಂಗಪಡಿಸಿದೆ.

ಕೇರಳದ ಕೊಚ್ಚಿ ಸಮೀಪ ಅರಬಿ ಸಮುದ್ರದಲ್ಲಿ ಹ ‘ನೀರೊಳಗಿನ ದ್ವೀಪ’ ಪತ್ತೆಯಾಗಿದ್ದು, ಹುರುಳಿ ಬೀಜದ ಆಕಾರದಲ್ಲಿದೆ. ಭೂಗರ್ಭ ಶಾಸ್ತ್ರಜ್ಞರಿಗೆ ಇದು ಕುತೂಹಲ ಹುಟ್ಟಿಸಿದೆ.

ಉಪಗ್ರಹ ಚಿತ್ರವನ್ನು ಮೊದಲು ಚೆಲ್ಲಾನಮ್ ಕಾರ್ಶಿಕಾ ಪ್ರವಾಸೋದ್ಯಮ ಅಭಿವೃದ್ಧಿ ಸೊಸೈಟಿ ಗಮನಿಸಿದೆ. ಅಧ್ಯಕ್ಷ ಕೆಎಕ್ಸ್ ಜುಲಪ್ಪನ್‌ ದ್ವೀಪದಂತಹ ರಚನೆ ಇರುವ ಗೂಗಲ್ ನಕ್ಷೆಗಳ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೊಸೈಟಿಯು ನಂತರ ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯಕ್ಕೆ (ಕುಫೋಸ್) ಆವಿಷ್ಕಾರದ ಬಗ್ಗೆ ಮಾಹಿತಿ ನೀಡಿದೆ.

ಗೂಗಲ್ ನಕ್ಷೆಗಳ ಪ್ರಕಾರ, 8 ಕಿ.ಮೀ ಉದ್ದ ಮತ್ತು 3.5 ಕಿ.ಮೀ ಅಗಲವಿದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲು ಕುಫೋಸ್‌ನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು