ಇತ್ತೀಚಿನ ಸುದ್ದಿ
ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ: ಮುಂದಿನ ದಿನಗಳಲ್ಲಿ ಮಂಗಳೂರು ಸಹಿತ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
06/06/2023, 13:14
ಮಂಗಳೂರು (reporterkarnataka.com): ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆಯ ಅವಧಿಯಲ್ಲಿ ಸಮುದ್ರದ ಅಲೆಗಳು ಹೆಚ್ಚಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೀರು ನಿಲ್ಲುವ ತಗ್ಗು ಪ್ರದೇಶ, ನದಿ, ಹೊಳೆ, ತೋಡು ಮುಂತಾದ ಕಡೆಗಳಿಗೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಕ್ಕೆ ಹೋಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನ ಬಿಟ್ಟು ಎಲ್ಲಿಗೂ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.