ಇತ್ತೀಚಿನ ಸುದ್ದಿ
ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ: ಗೋವಾದಿಂದ 920 ಕಿಮೀ ದೂರದಲ್ಲಿ ಕೇಂದ್ರೀಕೃತ
08/06/2023, 08:48
ಬೆಂಗಳೂರು(reporterkarnataka.com): ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈರುತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ
ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ.