9:54 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿ ಬಂಧನ; ವಾಹನ, 2 ಕೋವಿ ವಶ

19/01/2025, 19:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.
ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಕಾರಿ ಮಾಡಿದ್ದ.
ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯ ಅವರನ್ನು ಬಂಧಿಸಿ ವನ್ಯಜೀವಿ ಸಾಂಬಾರ್ ಜಿಂಕೆಯ ಅಂದಾಜು 40 ಕೆಜಿ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ರೈಫಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿದೆ. ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಹಾರ್ಶ್, ಪೂರಪ್ಪ ಮತ್ತು ಇತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು