5:29 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

19/12/2024, 13:33

ಬೆಳಗಾವಿಸುವರ್ಣಸೌಧ (reporterkarnataka.com): ಈವರೆಗೆ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸದಸ್ಯರಾದ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು,
ಒಟ್ಟು 2,59,199 ಅರ್ಜಿಗಳು ತಿರಸ್ಕೃತವಾಗಿದ್ದು, 23,583 ಅರ್ಜಿಗಳು ಮಾತ್ರ ಬಾಕಿ ಇರುತ್ತವೆ. ರಾಜ್ಯದಲ್ಲಿ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಾನಾ ಕಾರಣಗಳಿಂದ ನಿಧಾನಗತಿಯಲ್ಲಿರುತ್ತದೆ ಎಂದು ಅವರು ತಿಳಿಸಿದರು.
ಅರ್ಜಿದಾರರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅರಣ್ಯ ಹಕ್ಕು ಸಮಿತಿಗಳ ಮುಂದೆ ಸಲ್ಲಿಸದಿರುವುದು. ಪರಿಶಿಷ್ಟ ಪಂಗಡಕ್ಕೆ ಸೇರಿರದ ಇತರೆ ಪಾರಂಪರಿಕ ಅರಣ್ಯವಾಸಿಗಳು 75 ವರ್ಷಗಳಿಂದ ಅರಣ್ಯ ಭೂಮಿ ಅವಲಂಬಿಸಿರುವ ಬಗ್ಗೆ ದಾಖಲೆ ಒದಗಿಸದೇ ಇರುವುದು. ರಾಷ್ಟ್ರೀಯ ಅಭಯಾರಣ್ಯ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗುವುದಕ್ಕೂ ಮೊದಲೇ ಅರಣ್ಯವಾಸಿಗಳು ಸ್ಥಳಾಂತರಗೊಂಡಿರುವುದರಿಂದಅರ್ಜಿಗಳು ತಿರಸ್ಕೃತವಾಗಿವೆ.
ಉಪವಿಭಾಗ ಸಮಿತಿ (SDLC) ಮತ್ತು ಜಿಲ್ಲಾ ಮಟ್ಟದ ಸಮಿತಿ (DLC) ಗಳಲ್ಲಿ ನಾಮನಿರ್ದೇಶಿತ ತಾಲ್ಲೂಕು/ ಜಿಲ್ಲಾ ಪಂಚಾಯಿತಿ ಸದಸ್ಯರಿಲ್ಲದಿರುವ ಕಾರಣಗಳಿಂದ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಿಧಾನಗತಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು