5:57 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅರ್ಬಿ ಕುಂತೂರು: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ

23/05/2025, 14:44

ಬೆಳ್ತಂಗಡಿ(reporterkarnataka.com): ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಂ ಸಭಾಂಗಣದ ಉದ್ಘಾಟನೆಯ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣವನ್ನು ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಗಿದ್ದು, 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿರುತ್ತಾರೆ.

ಶ್ರೀಮತಿ ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಶೇಷತೆಯನ್ನು ತಿಳಿಸಿದರು, ಶ್ರೀಮತಿ ಪ್ರಭಾವತಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು, ಶ್ರೀಮತಿ ಮಾಯಾ ಅತ್ರಿಜಾಲು ಹಾಗೂ ಅಲ್ಲಿನ ಅರ್ಬಿ ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷರು ಕೃಷ್ಣಕುಮಾರ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವಿಣ್ ಆಳ್ವ ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ವ್ಯವಸ್ಥೆಗೆ ಸಹಕರಿಸಿದರು. ಈ ಸಂದರ್ಭ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರ ಉಪಸ್ಥಿತಿ ಎಲ್ಲರಲ್ಲೂ ಧನ್ಯತೆಯ ಭಾವವನ್ನು ಮೂಡಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು