10:17 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

36.50 ಕೋಟಿ ವೆಚ್ಚದಲ್ಲಿ ಹಾರಂಗಿಗೆ ಕಮಾನು ಸೇತುವೆ ಭಾಗ್ಯ; ನಾಲೆ ಅಭಿವೃದ್ಧಿಗೆ 49.90 ಕೋಟಿ: ರಾಜ್ಯ ಸಚಿವ ಸಂಪುಟ ಅನುಮೋದನೆ

18/07/2025, 11:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕಮಾನು ಸೇತುವೆ (Arch | Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ರಾಜ್ಯ ಸಕಾ೯ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ನೀಡಿದ ಪ್ರಸ್ತಾವನೆಯನ್ನು ಅಂಗೀಕರಿಸಿ ಸಕಾ೯ರ ಇದೀಗ ಕಮಾನು ಸೇತುವೆಗೆ ಅನುಮೋದನೆ ನೀಡಿದೆ. ಜಲಾಶಯದ ಎಡದಂಡೆ ಕಾಲುವೆ ವಿತರಣೆ ನಾಲೆ ಅಭಿವೃದ್ಧಿ ಸಂಬಂಧ ರೂ. 49.90 ಕೋಟಿ ವೆಚ್ಚದಲ್ಲಿ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವಸಂಪುಟ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸಲ್ಲಿಸಿದ ಪ್ರಸ್ತಾವನೆಗೆ ಒಪ್ಪಿಗೆ ದೊರೆತು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಸಕಾ೯ರದಿಂದ ಸೂಕ್ತ ಸ್ಪಂದನೆಗಾಗಿ ಹಷ೯ ವ್ಯಕ್ತಪಡಿಸಿರುವ ಮಂಥರ್ ಗೌಡ, ಇದರಿಂದ ಸಾಕಷ್ಟು ರೀತಿಯಲ್ಲಿ ಪ್ರಯೋಜನವಾಗಲಿದ್ದು, ಹಾರಂಗಿಯ ಸೌಂದಯ೯ ವೖದ್ದಿಸುವುದಲ್ಲದೇ ಈಗ ಜಲಾಶಯದ ಮುಂಬದಿಯಲ್ಲಿನ ಅಪಾಯಕಾರಿ ಪರಿಸ್ಥಿತಿ ನಿವಾರಣೆಯಾಗಲಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು