1:37 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ

10/09/2021, 09:08

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಯಾ ಗ್ರಾಮದಲ್ಲಿ ಶಾಸಕರನ್ನು ಮಂಗಳವಾದ್ಯ ಪಟಾಕಿ ಸಿಡಿಸುವ ಮುಖಾಂತರ ಬರ ಮಾಡಿಕೊಂಡರು.

ನಾಗಮಂಗಲ ತಾಲೂಕಿನಲ್ಲಿ ಸುರೇಶ್ ಗೌಡರು ಈಗಾಗಲೇ ಸುಮಾರು ಹೋಬಳಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಚಾಲನೆ ನೀಡಿದ್ದು ಕುಡಿಯುವ ನೀರಿನ ಹರಿಕಾರರಾಗಿ ಜನರ ಬಾಯಲ್ಲಿ ಮನೆಮಾತಾಗಿದೆ.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಾದ ಯಡವನಹಳ್ಳಿ, ಅಂಕನಹಳ್ಳಿ, ಹಿದುವ,ದೊಡ್ಡಜಕ್ಕನಹಳ್ಳಿ ರಾಮೇನಹಳ್ಳಿ, ದಂಡೆಬಾಳ, ದೊಡ್ಡಉಪ್ಪಳ, ಹದಮಗೆರೆ, ಲಕ್ಕೇಗೌಡನ ಕೊಪ್ಪಲು. ದೇವಲಾಪುರ, ಕುಡುಗಬಾಳು, ಮದ್ದೇನಹಟ್ಟಿ, ದಂಡಿಗನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕಾಮಗಾರಿ ಯೋಜನೆಗೆ ಗುದ್ದಲಿ ಪೂಜೆ ಮಾಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಕೋಟಿ ರವಿ ಡೈಮಂಡ್ ನರಸಿಂಹಮೂರ್ತಿ ಆಯಾ ಗ್ರಾಮ ಅಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು