ಇತ್ತೀಚಿನ ಸುದ್ದಿ
Breaking News : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ
13/09/2021, 15:09
ಮಂಗಳೂರು (Reporterkarnataka.com)
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಆಸ್ಕರ್ ಫರ್ನಾಂಡಿಸ್ (80) ವಿಧಿವಶರಾಗಿದ್ದಾರೆ. ಮನೆಯಲ್ಲಿ ಆಯತಪ್ಪಿ ಬಿದ್ದಾಗ ಅವರ ತಲೆಗೆ ಭಾರೀ ಗಾಯವಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.














