3:53 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು

25/05/2021, 07:32

 

ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ.

ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ
ವಿವಿಧ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿತ್ತು. ತಮಗೂ ಪ್ಯಾಕೇಜ್ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಮೊದಲ ಪ್ಯಾಕೇಜ್ ನಲ್ಲಿ ಆರ್ಥಿಕ ನೆರವು ಸಿಗದೇ ಸಂಕಷ್ಟದಲ್ಲಿರುವ ವರ್ಗಗಳಿಗೆ ಎರಡನೇ ಪ್ಯಾಕೇಜ್ ನಲ್ಲಿ ನೆರವು ನೀಡುವ ಸಾಧ್ಯತೆ ಇದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು