1:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್

25/05/2021, 15:03

ಶ್ರೀನಿವಾಸಪುರ(reporterkarnataka news): ಕೊರೊನಾ  ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . ಆದ್ದರಿಂದ ಸೋಂಕಿತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ವರ್ತನೆ ಮಾಡಿದರೆ ಸಾರ್ವಜನಿಕರು ಪಿ.ಡಿ.ಓ ಗೆ ದೂರು ಸಲ್ಲಿಸಬಹುದು , ಕೂಡಲೇ ಪೋಲೀಸ್ , ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಎಂ . ಗೌಸ್‌ಸಾಬ್ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು