ಇತ್ತೀಚಿನ ಸುದ್ದಿ
ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿಗೆ ಬೃಹತ್ ಪ್ರತಿಭಟನಾ ಜಾಥಾ
27/09/2021, 16:33
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತಾಲೂಕು ಅಧ್ಯಕ್ಷ ಮಾದೇವ್ ಮಡಿವಾಳ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ರೈತಸಂಘದ ಸದಸ್ಯರು ಹಾಗೂ ರೈತ ಸಂಘದ ಮಹಿಳೆಯರು ತಲೆ ಮೇಲೆ ಕಟ್ಟಿಗೆಯ ಹೊರೆಯನ್ನು ಹೊತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.














