ಇತ್ತೀಚಿನ ಸುದ್ದಿ
ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ
21/10/2021, 16:30
ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ.

ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸುವರು. ನವೆಂಬರ್ 8ರಂದು ದಿಲ್ಲಿಯಲ್ಲಿ ತಲುಪುವಂತೆ ಅವರು ಪ್ರಯಾಣ ಬೆಳೆಸಲಿದ್ದಾರೆ.
2020ರ ಸಾಲಿನ ಪದ್ಮ ಪ್ರಶಸ್ತಿಯನ್ನು ಮಾರ್ಚ್ ತಿಂಗಳಿನಲ್ಲಿ ಪ್ರದಾನ ಮಾಡಬೇಕಿತ್ತು. ಆದರೆ ದೇಶದಲ್ಲಿ ಕೊರೊನಾ ಸೋಂಕಿನ ಭೀತಿ ಇದ್ದ ಕಾರಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು.
ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ ವ್ಯಕ್ತಿ. ಕಿತ್ತಳೆ ಹಣ್ಣು ಮಾರಿ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟಿದರು.














