6:52 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮುಂಬಯಿ ಲೋಕಲ್ ಟ್ರೇನ್ ಗಳಲ್ಲಿ ಸಂಚರಿಸಬೇಕೇ?: ಹಾಗಾದರೆ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ ! 

27/10/2021, 08:18

ಮುಂಬೈ(reporterkarnataka.com) : ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸುವವರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕಾದುದು ಕಡ್ಡಾಯವಾಗಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಹಲವಾರು ಕಂಪನಿಗಳಲ್ಲಿ ಈಗಾಗಲೇ ಉದ್ಯೋಗಿಗಳನ್ನು ಕಚೇರಿಗೆ ಕರೆಯಲಾಗಿದೆ. ಕಚೇರಿಯಿಂದ ಕೆಲಸ ನಿರ್ವಹಿಸುವವರು, ಕಾರ್ಮಿಕರು ಮತ್ತು ಸರ್ಕಾರಿ ನೌಕರರಿಗೆ ಮುಂಬೈ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸಲು ಸಂಪೂರ್ಣ ವ್ಯಾಕ್ಸಿನೇಷನ್ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಕೋವಿಡ್ -19 ಲಸಿಕೆಯ ಎರಡೂ ಡೋಸ್‌ಗಳನ್ನು ಹಾಕಿಸಿಕೊಂಡ ಹಾಗೂ ಎರಡನೇ ಡೋಸ್ ಹಾಕಿಸಿಕೊಂಡು 14 ದಿನಗಳು ಕಳೆದುಹೋದ ಜನರನ್ನು ಸಂಪೂರ್ಣ ಲಸಿಕೆ ಹಾಕಿಸಿಕೊಂಡ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು