7:08 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

09/11/2021, 10:16

ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್  10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. 

ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕರು, ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸಿಕೊಟ್ಟು, ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನನ ಮಾಡಲಿದ್ದಾರೆ, ಆ ಮೂಲಕ  ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿಸಲಾಗವುದು ಎಂದು ಹೇಳಿದರು. ಮೊದಲ ಹಂತದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಅಭಿಯಾನಕ್ಕೆ ಇದೇ ನ.10ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು, ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ, ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ಸಹ ನೀಡಲಾಗುವುದು ಎಂದು ತಿಳಿಸಿದರು. 

ಈ ಹಿನ್ನಲೆಯಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸುವಂತೆ ಡಿಎಚ್‌ಒ ಕೋರಿದರು.  



ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು  ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಹಾಗೂ ನಗರ ವ್ಯಾಪ್ತಿಯ ಎಲ್ಲಾ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು