7:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು