2:07 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು