8:08 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್‌ಗಳ ಬಗ್ಗೆ ತಿಂಗಳೊಳಗೆ ವರದಿ: ಜಿಲ್ಲಾಧಿಕಾರಿ ಸೂಚನೆ

27/12/2021, 22:31

ಮಂಗಳೂರು(reporterkarnataka.com):  ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್‌ಗಳ ಬಗ್ಗೆ ತಿಂಗಳೊಳಗೆ ವರದಿ ನೀಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಅನಧಿಕೃತ ಕ್ರಷರ್ ಘಟಕಗಳ ಕಾರ್ಯಾಚರಣೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗಣಿ ಮತ್ತು ಭೂವಿಜ್ಞಾನ, ಜಿಲ್ಲಾ ಪಂಚಾಯತ್, ಪೊಲೀಸ್, ಅರಣ್ಯ, ಪರಿಸರ ಇಲಾಖೆ, ತಾಲೂಕುಗಳ ತಹಶೀಲ್ದಾರರು ಹಾಗೂ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ ಘಟಕದ ಮಾಲೀಕರಿಗೆ ಸಲಹೆ ಸೂಚನೆ ಹಾಗೂ ನಿರ್ದೇಶನಗಳನ್ನು ನೀಡಿ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನಗಳನ್ನು ನೀಡಿದರು. 

ಸೂಚನೆಗಳು ಇಂತಿವೆ:

* ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸರ್ಕಾರದ ಜಾಗಗಳಲ್ಲಿ ನಡೆಯುತ್ತಿರುವ 58 ಕ್ವಾರಿಗಳನ್ನು ಪರಿಶೀಲಿಸಿ, ಅವು ಕಾನೂನಾತ್ಮಕವಾಗಿ ನಡೆಯುತ್ತಿವೆಯೇ ಎಂಬ ಬಗ್ಗೆ ಒಂದು ತಿಂಗಳೊಳಗೆ ವರದಿ ನೀಡಬೇಕು.

* ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಘಟಕಗಳು ನಿಯಮ ಉಲ್ಲಂಘಿಸಿದ್ದಲ್ಲೀ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ದೂರು ಸಲ್ಲಿಸಬೇಕು.

* ಪಟ್ಟಾ ಜಾಗದಲ್ಲಿ ಗಣಿಗಾರಿಕೆ ನಡೆಸುತ್ತಿದ್ದಲ್ಲೀ ಹಿರಿಯ ಭೂವಿಜ್ಞಾನಿಗಳು ಪರಿಶೀಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

 * ಭೂದಾಖಲೆಗಳು ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ದ್ರೋಣ್ ಮೂಲಕ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಘಟಕಗಳ ಸಮಿಕ್ಷೆ ನಡೆಸಬೇಕು. 

* ಪರವಾನಗಿ ಪಡೆದು, ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ನಡೆಸುತ್ತಿರುವವರು ಕಾನೂನು ಬದ್ದವಾಗಿ ಹಾಗೂ ಆ ವ್ಯಾಪ್ತಿಯೊಳಗೆ ನಡೆಸುತ್ತಿರುವ ಬಗ್ಗೆ ಖಾತ್ರಿ ಪಡಿಸಬೇಕು.

* ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ನಡೆಸುತ್ತಿರುವವರು ಇದ್ದಲ್ಲೀ ಕೂಡಲೇ ಪರವಾನಗಿ ಪಡೆದಿರುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಮಾಲೀಕರು ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು. 

* ಜಿಲ್ಲೆಯಲ್ಲಿರುವ ಪ್ರಮುಖ ಕಟ್ಟಡಗಳು, ಶಾಲೆ, ಅಂಗನವಾಡಿ ಕೇಂದ್ರ, ಹಾಸ್ಟೆಲ್, ದೇವಸ್ಥಾನ, ಮಸೀದಿ, ಚರ್ಚ್ ಹಾಗೂ ಇತ್ಯಾದಿಗಳು ಹಾನಿಯಾಗದಂತೆ ಗಣಿಗಾರಿಕೆ ಹಾಗೂ ಕ್ರಷರ್ ಬ್ಲಾಸ್ಟಿಂಗ್ ವೇಳೆ ಗಮನ ಹರಿಸಬೇಕು.

* ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ನಡೆಸುವವರು ಸಿಸ್ಮೋಗ್ರಾಪ್ ಯಂತ್ರವನ್ನು ಬಳಸಬೇಕು, ಅದರ ಖರೀದಿ ದುಬಾರಿಯಾದಲ್ಲೀ ತಮ್ಮ ಸಂಘದ ವತಿಯಿಂದ ಖರೀದಿಸಿ ಕನಿಷ್ಠ ತಾಲೂಕಿಗೆ ಒಂದಾದರೂ ಸಿಸ್ಮೋಗ್ರಾಫ್ ಯಂತ್ರವನ್ನು ಇಟ್ಟುಕೊಳ್ಳಬೇಕು ಹಾಗೂ ಬ್ಯಾಸ್ಟಿಂಗ್ ಮಾಡುವಾಗ ಮನೆಗಳು ಇತರೆ ರಚನೆಗಳು ಹಾನಿಗೀಡಾಗುವ ಅಥವಾ ಬಿರುಕು ಮೂಡುವಂತಹ ಸಂದರ್ಭಗಳಲ್ಲಿ ಅಳವಡಿಸಿ, ಆ ಹಾನಿಗಳಿಗೆ ನೈಜ ಕಾರಣ ಪತ್ತೆ ಮಾಡಬೇಕು. 

* ಜಿಲ್ಲೆಯಲ್ಲಿ ಹಸಿರು ಪ್ರಮಾಣ ಹೆಚ್ಚಿರುವುದರಿಂದ ಅರಣ್ಯ ನಾಶವಾಗದಂತೆ, ಜನರಿಗೆ ತೊಂದರೆಯಾಗದಂತೆ ಅತ್ಯಂತ ಎಚ್ಚರದಿಂದ ಕಲ್ಲುಗಣಿಗಾರಿಕೆ ಹಾಗೂ ಕ್ರಷರ್‌ಗಳನ್ನು ನಡೆಸಬೇಕು. 

* ಯಾವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್‌ಗಳು ಅಕ್ರಮ ಅಥವಾ ಸಕ್ರಮ ಎಂಬ ಬಗ್ಗೆ ಅಧಿಕಾರಿಗಳಲ್ಲಿ ಅರಿವಿರಬೇಕು.

* ಗಣಿಗಾರಿಕೆ ಕುರಿತು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಬೇಕು, ಅಕ್ರಮವನ್ನು ಗುರುತಿಸಿ ನಿಲ್ಲಿಸಬೇಕು, ಕಾನೂನುಬದ್ದವಾಗಿ ಮಾಡುತ್ತಿರುವವರು ವ್ಯಾಪ್ತಿಯೊಳಗೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. 

* ರಾಜಧನ ಸಂಗ್ರಹ ಬಗ್ಗೆ ವರದಿ ನೀಡಬೇಕು. *ಜಿಲ್ಲೆಯ ಯಾವುದೇ ಸ್ಥಳದಲ್ಲಿ ಏನೇ ಅಕ್ರಮ ಚಟುವಟಿಕೆಯಾದರೂ ಕೂಡಲೇ ಸಂಬಂಧಿಸಿದ ಟಾಸ್ಕ್ ಪೋರ್ಸ್ಗೆ ಮಾಹಿತಿ ನೀಡಬೇಕು. 

* 96 ಕಲ್ಲುಗಣಿಗಾರಿಕೆ ಹಾಗೂ 60 ಕ್ರಷರ್‌ಗಳಿಗೆ ನೀಡಲಾದ ಅನುಮತಿ ಪತ್ರಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಳುಹಿಸಬೇಕು, ಅವರು ಅದನ್ನು ಪರಿಶೀಲಿಸಲಿದ್ದಾರೆ. ಇವುಗಳನ್ನು ಹೊರತು ಪಡಿಸಿ, ಉಳಿದವೆಲ್ಲವೂ ಅಕ್ರಮ ಎಂಬುದನ್ನು ಪ್ರಚಾರ ಮಾಡಬೇಕು.    

* ಜಿಲ್ಲೆಯಲ್ಲಿ ಕೆಂಪು ಕಲ್ಲು ಅಥವಾ ಗ್ರಾನೈಟ್‌ನ ಅಕ್ರಮ ಗಣಿಗಾರಿಕೆ ಕಂಡುಬಂದರೆ ಗ್ರಾಮಲೆಕ್ಕಿಗರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.  

ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ್ ಗುಣಾರೆ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಕುಮಾರ್ ವೇದಿಕೆಯಲ್ಲಿದ್ದರು. 

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ನಿರಂಜನ್, ಕಲ್ಲುಗಣಿಗಾರಿಕೆ ಹಾಗೂ ಕ್ರಷರ್ ಸಂಘದ ಜಿಲ್ಲಾ ಅಧ್ಯಕ್ಷ ಮನೋಜ್ ಶೆಟ್ಟಿ ಸೇರಿದಂತೆ ವಿವಿಧ ಕಲ್ಲುಗಣಿಗಾರಿಕೆ ಹಾಗೂ ಕ್ರಷರ್‌ಗಳ ಮಾಲೀಕರು, ಪದಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು