7:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮನೆ ಮನೆಗೆ ಭೇಟಿ ನೀಡಿ ಏಡ್ಸ್ ಕುರಿತು ಅರಿವು ಅಭಿಯಾನ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ 

12/01/2022, 09:31

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲ್ಲೂಕಿನಾದ್ಯಂತ ಮನೆ ಮನೆಗೆ ಜನವರಿ 17 ಮತ್ತು 18 ರಂದು ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜನಸಾಮಾನ್ಯರಿಗೆ ಹೆಚ್‌ಐವಿ / ಏಡ್ಸ್ ನಿಯಂತ್ರಣ , ಕಳಂಕ ಮತ್ತು ತಾರತಮ್ಯ , ಸಾಮಾಜಿಕ ಸವಲತ್ತು ಇತ್ಯಾದಿಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು . ಇದರಿಂದ ಇತ್ತೀಚಿನ ವರ್ಷಗಳಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ . ಆದಾಗ್ಯೂ ಹೆಚ್ಐವಿ ಸೋಂಕನ್ನು ಶೂನ್ಯಕ್ಕೆ ತರುವ ಸಲುವಾಗಿ ಕಳೆದ ವರ್ಷದಲ್ಲಿ ಜಿಲ್ಲೆಯ ಕೋಲಾರ ತಾಲ್ಲೂಕಿನಲ್ಲಿ ಮನೆ ಮನೆ ಮಾಹಿತಿ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು . ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನಲ್ಲಿ ಮನೆ ಮನೆ ಮಾಹಿತಿ ಅಭಿಯಾನವನ್ನು ( Door to Door Campaign ) ಹಮ್ಮಿಕೊಳ್ಳಲಾಗಿದೆ ಎಂದರು . ಈ ಅಭಿಯಾನದಲ್ಲಿ ಆಟೋಗಳ ಮೂಲಕ ಪ್ರಚಾರ ಆಂದೋಲನ , ಜಾನಪದ ಕಲಾತಂಡಗಳ ಮೂಲಕ ತಾಲ್ಲೂಕಿನ 15 ಗ್ರಾಮಗಳಲ್ಲಿ ದಿನಾಂಕ : 17.01.2022 ರಿಂದ 31.01.2022 ರವರೆಗೆ ಹೆಚ್‌ಐವಿ / ಏಡ್ಸ್ ಕುರಿತು ಬೀದಿನಾಟಕದ ಮೂಲಕ ಪ್ರದರ್ಶನ ನಡೆಸಲಾಗುತ್ತಿದೆ . ಕೆಜಿಎಫ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಧ್ವನಿಸುರಳಿಯ ಮುಖಾಂತರ ಸಾರ್ವಜನಿಕರಿಗೆ ಹೆಚ್ ಐವಿ / ಏಡ್ಸ್ ಬಗ್ಗೆ ಅರಿವು ಹಾಗೂ ಸ್ಥಳೀಯ ಬಸ್ಸುಗಳಲ್ಲಿ ಹೆಚ್‌ಐವಿ / ಏಡ್ಸ್ ಬಗ್ಗೆ ಮಾಹಿತಿ ಇರುವ ಫಲಕಗಳನ್ನು ಅಳವಡಿಸಲಾಗುವುದು . ವಿವಿಧ ಗ್ರಾಮಗಳಲ್ಲಿ ಭಿತ್ತಿಚಿತ್ರವನ್ನು ಅಂಟಿಸುವುದು ಹಾಗೂ ಪ್ರತಿಮನೆಗೆ ಕರಪತ್ರ ವಿತರಣೆ ಮಾಡಲಾಗುವುದು ಎಂದರು .

ಮನೆ ಮನೆ ಮಾಹಿತಿ ಅಭಿಯಾನದಲ್ಲಿ ಒಟ್ಟು 57143 ಮನೆಗಳನ್ನು ತಲುಪುವ ಉದ್ದೇಶವನ್ನು ಹೊಂದಿದ್ದು , ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಹೆಚ್‌ಐವಿ / ಏಡ್ಸ್ ನಿಯಂತ್ರಣ , ಚಿಕಿತ್ಸೆ ಹಾಗೂ ಸೇವೆಗಳ ಬಗ್ಗೆ ಅರಿವನ್ನು ಮೂಡಿಸಿ , ಕರಪತ್ರವನ್ನು ವಿತರಿಸಿ ನಂತರ ಹೆಚ್‌ಐವಿ / ಏಡ್ಸ್ ಮಾಹಿತಿ ಸ್ಟಿಕರ್‌ನ್ನು ಅಂಟಿಸಲಾಗುವುದು . ಈ ಎಲ್ಲಾ ಚಟುವಟಿಕೆಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೇಲ್ವಿಚಾರಣೆ ಮಾಡುತ್ತಾರೆ ಎಂದರು . ಕೋಲಾರ ಜಿಲ್ಲೆಯಲ್ಲಿ 2019-20 ನೇ ಸಾಲಿನಲ್ಲಿ 391 ಪಾಸಿಟೀವ್ ಪ್ರಕರಣಗಳು , 2020-21 ನೇ ಸಾಲಿನಲ್ಲಿ 274 ಪಾಸಿಟೀವ್ ಪ್ರಕರಣಗಳು ಕಂಡುಬಂದಿದ್ದವು . ಪ್ರತಿ ವರ್ಷ ಪಾಸಿಟೀವ್ ಪ್ರಕರಣಗಳು ಕಡಿಮೆಯಾಗುತ್ತಿವೆ . ಕೋಲಾರ ಜಿಲ್ಲೆಯಲ್ಲಿ 4868 ಪುರುಷರು , 4299 ಮಹಿಳೆಯರು , 173 ಮಕ್ಕಳು ಸೇರಿದಂತೆ 9543 ಹೆಚ್.ಐ.ವಿ ಸೋಂಕಿತರು ಎಆರ್‌ಟಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು . ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಜಗದೀಶ್ ,ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಕಮಲ ಅವರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು