11:03 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ: ಮಂಗಳೂರಿನಲ್ಲಿ ಸಾಧಾರಣ ವರ್ಷಧಾರೆಗೂ ರಸ್ತೆಯಲ್ಲಿ ನೀರು!

05/06/2021, 07:16

ಬೆಂಗಳೂರು(reporterkarnataka news): ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯಯಿದ್ದು, ದಕ್ಷಿಣ ಕನ್ನಡದ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ.

ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕೇರಳ, ಕರ್ನಾಟಕ, ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್ ಘಡ್, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಹೆಚ್ಚಿದೆಯೆಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು