1:22 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಹೊಸ ದಿಗಂತ ವಿಶೇಷ ವರದಿಗಾರ  ಬಾಳೆಪುಣಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ

12/04/2022, 22:51

ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಹೊಸ ದಿಗಂತ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇಪುಣಿ ಆಯ್ಕೆಯಾಗಿದ್ದಾರೆ.

ಏ.೧೪ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ೫ ಲಕ್ಷ ರೂ. ನಗದು, ೨೦ ಗ್ರಾಂನ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.

ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ ೨೫ ವರ್ಷಗಳಿಂದ ಕಾರ್ಯನಿರ್ವಸುತ್ತಿರುವ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು ೩೬ ವರ್ಷಗಳ ಅನುಭವ ಹೊಂದಿದ್ದಾರೆ. ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಹೆಸರು ಗಳಿಸಿರುವ ಅವರು, ಹಲವಾರು ಮಂದಿ ಎಲೆಮರೆಕಾಯಿಯಂತಿದ್ದ ಸಾಧಕರನ್ನು ಬೆಳಕಿಗೆ ತಂದು ಅವರಿಗೆ ಪ್ರಶಸ್ತಿ ದೊರಕಲು ಕಾರಣರಾಗಿದ್ದಾರೆ. ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು  ಮೊದಲ ಬಾರಿಗೆ ಜಗತ್ತಿಗೆ ಪರಿಚಯಿಸಿದ ಕೀರ್ತಿ ಬಾಳೇಪುಣಿ ಅವರಿಗೆ ಸಲ್ಲುತ್ತಿದೆ. ಬಾಳೇಪುಣಿ ಅವರಿಗೆ ಈ ಹಿಂದೆ ೨೦೧೧ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, ೨೦೦೪ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, ೨೦೧೪ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ೨೦೧೨ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು