ಇತ್ತೀಚಿನ ಸುದ್ದಿ
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ
28/12/2022, 21:28
ಪುತ್ತೂರು (reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜಿನ ಅಂತರಿಕ ಗುಣಮಟ್ಟ ಭರವಸೆ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ದತ್ತು ಗ್ರಾಮವಾದ ಕದಂಬಾರಿಯಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಲೆ ಪ್ರತಿಷ್ಠಾನದ ಆಧ್ಯಕ್ಷ ಕಡಮಜಲು ಸುಭಾಷ್ ರೈ ಅವರು, ಇತ್ತೀಚೆಗೆ ಪ್ಲಾಸ್ಟಿಕ್ ಬಳಕೆಯು ಅತಿಯಾಗಿದೆ. ಪ್ಲಾಸ್ಟಿಕ್ ಮಣ್ಣಿನಲ್ಲಿ ಬೆರೆಯುವುದಿಲ್ಲ. ಇದರ ಸಮರ್ಪಕ ನಿರ್ವಹಣೆ ಅಗತ್ಯ.

ಇದರಿಂದ ಪರಿಸರದ ಮೇಲಾಗುವ ಪ್ರತಿಕೂಲ ಪರಿಣಾಮಗಳನ್ನು ತರಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಕುಂಬ್ರ ಅವರು “ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ
ಕರ್ತವ್ಯವಾಗಿದೆ. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮಗಳಾಗುತ್ತದೆ. ಗ್ರಾಮ ಸ್ವಚ್ಛತೆಯಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸುತ್ತಿರುವುದು ನಮಗೆಲ್ಲ ಸಂತೋಷದ ವಿಚಾರ” ಎಂದು ಹೇಳಿದರು.
ಕಾಲೇಜಿನ ಎಸ್ ಎಸ್ ಎಸ್ ಅಧಿಕಾರಿ ಪ್ರೊ. ವಾಸುದೇವ ವಿದ್ಯಾರ್ಥಿಗಳಿಗೆ ಪರಿಸರ ಸ್ವಚ್ಛತೆಯ ಮಹತ್ವದ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳು ರಸ್ತೆಯ ಇಕ್ಕೆಲಗಳಲ್ಲೂ ಇರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕಿ ಪ್ರಿಯಾ ಸ್ವಾಗತಿಸಿದರು.ಕೃಷ್ಣ ಕುಮಾರ್ ವಂದಿಸಿದರು. ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಯಾದ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.














