11:14 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

120 ಮಂದಿಯ ಕಾಂಗ್ರೆಸ್ ಮೊದಲ ಪಟ್ಟಿ 2 ದಿನಗಳಲ್ಲಿ ಬಿಡುಗಡೆ?: ಕರಾವಳಿಯಲ್ಲಿ ಕೈ ಅಭ್ಯರ್ಥಿಗಳು ಯಾರು ಯಾರು?

05/02/2023, 12:02

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಶೀಘ್ರದಲ್ಲೇ 120 ಮಂದಿ ಅಭ್ಯರ್ಥಿಗಳ ಪ್ರಥಮ ಯಾದಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ, ಮಲೆನಾಡು ಹಾಗೂ ಮೈಸೂರು ಜಿಲ್ಲೆಗಳ ಅಭ್ಯರ್ಥಿ ಗಳ ಹೆಸರು ಮೊದಲ ಪಟ್ಟಿಯಲ್ಲಿ ಸೇರಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಬಾರಿಯ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳ ಬದಲಿಗೆ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಕಾಂಗ್ರೆಸ್ ಅದೃಷ್ಟ ಪರೀಕ್ಷೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಮೊದಲ ಪಟ್ಟಿ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮೊನ್ನೆ ಮೊನ್ನೆ ಮಹತ್ವದ ಸಭೆ ನಡೆಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆದಿತ್ತು.

ಪಕ್ಷದ ಜಿಲ್ಲಾ ಘಟಕಗಳು ಮಾಡಿರುವ ಶಿಫಾರಸು, ಕೆಪಿಸಿಸಿ ಕಾರ್ಯಾಧ್ಯಕ್ಷರು ತಯಾರಿಸಿದ ಪಟ್ಟಿ, ಕೆಪಿಸಿಸಿ ಅಧ್ಯಕ್ಷರು ನಡೆಸಿದ ಸರ್ವೇ ಹಾಗೂ ಪ್ರತಿಪಕ್ಷದ ನಾಯಕರು ನಡೆಸಿದ ಸರ್ವೇ ವರದಿಯನ್ನು ಕ್ರೋಢಿಕರಿಸಿ ಚರ್ಚೆ ನಡೆಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು