9:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ ವಿರುದ್ಧ ಪ್ರತಿಭಟನಾ ಪ್ರದರ್ಶನ

01/08/2021, 08:36

ಮಂಗಳೂರು(reporterkarnataka news): ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿಂದು ಸಿಪಿಐಎಂ, ಡಿವೈಎಫ್ ಐ ಹಾಗೂ ಜೆಎಂ ಎಸ್ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಬಸ್ ಮಾಲಿಕರ ವಿರುದ್ಧ ಘೋಷಣೆ ಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ , ಕೊರೊನಾ ಸಂಕಷ್ಟದ ಕಾಲದಲ್ಲಿ ಜನತೆಯ ಬದುಕೇ ದುಸ್ತರವಾಗಿದ್ದು, ಇದೇ ಸಂದರ್ಭದಲ್ಲಿ ಬಸ್ ಪ್ರಯಾಣ ದರವನ್ನೂ ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಬಾರಿ ಮಾಸ್ಕ್ ಹಾಕದ ಅಮಾಯಕ ಯುವಕನ ಮೇಲೆ ದಾಳಿ ನಡೆಸಿ, ತಾನು ಜನರ ಪರ ಎಂಬಂತೆ ಕಪಟ ನಾಟಕವಾಡಿದ ಜಿಲ್ಲಾಧಿಕಾರಿಗಳಿಗೆ, ಬಸ್ ಪ್ರಯಾಣ ದರಯೇರಿಕೆಯಿಂದ ಲಕ್ಷಾಂತರ ಜನರಿಗೆ ತೊಂದರೆ ಯಾಗುತ್ತೆ ಎಂಬ ಕನಿಷ್ಟ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು.

ಬಸ್ ಮಾಲಿಕರು 20% ಹೆಚ್ಚಳಕ್ಕೆ ಆಗ್ರಹಿಸಿದರೆ, ಜಿಲ್ಲಾಧಿಕಾರಿಗಳು 50%ಕ್ಕೂ ಅಧಿಕ ದರ ಏರಿಕೆಗೆ ಅನುಮತಿ ನೀಡಿರುವ ಮೂಲಕ ಬಸ್ ಮಾಲಿಕರ ಲಾಬಿಗೆ ದ.ಕ.ಜಿಲ್ಲಾಡಳಿತವು ಸಂಪೂರ್ಣ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ ಮಾತನಾಡಿ, ಬಸ್ ಪ್ರಯಾಣ ದರಯೇರಿಕೆಗೆ ಸಂಬಂಧಿಸಿ ಸಾರಿಗೆ ಪ್ರಾಧಿಕಾರದ ಸಭೆ ಕರೆಯಬೇಕಾದ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲನ್ನು ಕೇಳದೆ ಕೇವಲ ಬಸ್ ಮಾಲಕರ ಪರವಾಗಿ ವರ್ತಿಸಿರುವುದು ಭಾರೀ ಸಂಶಯಕ್ಕೆಡೆಮಾಡಿದೆ ಎಂದು ಜಿಲ್ಲಾಡಳಿತದ ಸರ್ವಾಧಿಕಾರಿ ನಡೆಯನ್ನು ಟೀಕಿಸಿದರು.

ಡಿವೈಎಫ್ ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಪ್ರತಿಯೊಂದು ಸಂದರ್ಭದಲ್ಲೂ ಸರಕಾರದ ಪರವಾಗಿ ತುತ್ತೂರಿ ಬಾರಿಸುವ ಬಸ್ ಮಾಲಿಕರು ಯಾವತ್ತಾದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೇರಿಕೆಯ ವಿರುದ್ದ ದ್ವನಿ ಎತ್ತಿದ್ದಾರೆಯೇ…? ನೆರೆಯ ಕೇರಳ ರಾಜ್ಯ ಸರಕಾರವು ಖಾಸಗೀ ಬಸ್ ಮಾಲಕರಿಗೆ 4 ತಿಂಗಳು ತೆರಿಗೆ ವಿನಾಯಿತಿ ನೀಡಿದಂತೆ, ಕರ್ನಾಟಕ ರಾಜ್ಯ ಸರಕಾರವೂ ತಮಗೆ ನೀಡಬೇಕೆಂದು ಯಾಕೆ ಒತ್ತಾಯಿಸುತ್ತಿಲ್ಲ.ಅದನ್ನು ಬಿಟ್ಟು ಜನಸಾಮಾನ್ಯರ ಬದುಕಿಗೆ ಕೊಡಲಿಪೆಟ್ಟು ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ದಯಾನಂದ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಬಾಬು ದೇವಾಡಿಗ, ಜೆಎಂ.ಎಸ್ ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಡಿವೈಎಫ್ ಐ ಜಿಲ್ಲಾ ನಾಯಕರಾದ ನವೀನ್ ಕೊಂಚಾಡಿ,ಮನೋಜ್ ವಾಮಂಜೂರು,ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ,ಕ್ರಷ್ಣ ತಣ್ಣೀರುಬಾವಿ, ಸಾಮಾಜಿಕ ಕಾರ್ಯಕರ್ತರಾದ ಜೆರಾಲ್ಡ್ ಟವರ್,ಅಶುಂತ ಡಿಸೋಜ, ಸಿಐಟಿಯು ಮುಖಂಡರಾದ ಸಂತೋಷ್ ಆರ್.ಎಸ್,ನಾಗೇಶ್ ಕೋಟ್ಯಾನ್ ಭಾಗವಹಿಸಿದ್ದರು.

ಪ್ರತಿಭಟನೆಯ ನೇತ್ರತ್ವವನ್ನು ಸಿಪಿಎಂ ಮಂಗಳೂರು ನಗರ ಮುಖಂಡರಾದ ದಿನೇಶ್ ಶೆಟ್ಟಿ, ಪ್ರದೀಪ್, ಮನೋಜ್, ಅಶೋಕ್ ಸಾಲ್ಯಾನ್, ಡಿವೈಎಫ್ ಐ ನಾಯಕರಾದ  ನೌಶಾದ್ ಬೆಂಗರೆ, ಜಗದೀಶ್ ಬಜಾಲ್, ಜೆಎಂ ಎಸ್ ಮುಖಂಡರಾದ ಜಯಲಕ್ಷ್ಮಿ,ಜೆಸಿಂತ ಡಿಸೋಜ ಮುಂತಾದವರು ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು