5:32 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು