3:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯ‌ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

09/12/2023, 12:16

ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಬಾಲವಿಕಾಸ ಶಾಲೆಯು ಇದೀಗ ಎಲ್ಲಾ ಸೌಕರ್ಯಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ವಿಸ್ತಾರವಾದ ಆಟದ ಮೈದಾನವನ್ನು ಹೊಂದಿದ್ದು ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ‌, ಶಾಲಾ ವಿದ್ಯಾರ್ಥಿಗಳು ಈ ಸೌಕರ್ಯಗಳನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರು”ಇಂದಿನ ಮಕ್ಕಳಿಗೆ ವ್ಯಾಯಾಮದ ಅಗತ್ಯವಿದೆ, ಅದು ಕ್ರೀಡೆಯಲ್ಲಿ ದೊರೆಯುತ್ತದೆ.ಶಿಕ್ಷಣ ಎಂದರೆ ಕೇವಲ‌ ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಪ್ರತಿಭೆಯ ಅನ್ವೇಷಣೆಯೂ ಶಿಕ್ಷಣವಾಗಿದೆ”ಎಂದರು. ಕ್ರೀಡೋತ್ಸವದಲ್ಲಿ ಕ್ರೀಡಾ ಜ್ಯೋತಿಯ ಆಗಮನ ಹಾಗೂ ಆಕರ್ಷಣೀಯ ಪಥಸಂಚಲನವು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕಿ ಮೋಹಿನಿ ಎ. ರೈ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ರಶ್ಮಿ ಫೆರ್ನಾಂಡಿಸ್ ಹಾಗೂ ಯಜ್ಞೇಶ್ವರಿ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು