1:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ; ಬಂಧನದ ಭೀತಿ

15/03/2024, 16:12

ಬೆಂಗಳೂರು(reporterkarnataka.com): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪ್ರಕರಣವನ್ನು ಸಿಒಡಿಗೆ ಹಸ್ತಾಂತರಿಸಲಾಗಿದೆ. ಈ ಮಧ್ಯೆ ಯಾವುದೇ ಸಂದರ್ಭದಲ್ಲಿ ಬಿಎಸ್ ವೈ ಬಂಧನ ಸಾಧ್ಯತೆಗಳಿವೆ.
ಸಂತ್ರಸ್ತೆ ಬಾಲಕಿಯ ತಾಯಿ ಅವರು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ. ಪ್ರಕರಣ ಸಂಬಂಧ ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು