7:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್  : ಮುಖ್ಯಮಂತ್ರಿ ಸೂಚನೆ

14/08/2021, 19:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂಡ ಹೊರಬಿದ್ದಿದೆ.

ರಾಜ್ಯದಲ್ಲಿ  ಮುಖ್ಯಮಂತ್ರಿಯವರು ಎಲ್ಲೇ ಪ್ರಯಾಣ ನಡೆಸಿದರೂ ಇನ್ನು ಮುಂದೆ ಜೀರೋ ಟ್ರಾಫಿಕ್ ವ್ಯವಸ್ಥೆ ಇರುವುದಿಲ್ಲ. ಅದರ ಬದಲಿಗೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಇರುತ್ತದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ತಕ್ಷಣ ತಾನು ಸಾಮಾನ್ಯ ಮನುಷ್ಯನಾಗಿ ಇರಲು ಇಚ್ಚಿಸುತ್ತೇನೆ ಎಂದು ತನ್ನ ಅಭಿಪ್ರಾಯವನ್ನು ಮಾಧ್ಯಮ ಮುಂದೆ ಹೇಳಿದ್ದರು. ರಾಜ್ಯ ಹಾಗೂ ಈ ದೇಶದ ಜನತೆ ಬಯಸುವುದು ಕೂಡ ಇದನ್ನೇ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ತರಹ ಸಿಂಪಲ್ ಸಿಎಂ ಅನ್ನೇ ಜನರು ಲೈಕ್ ಮಾಡುತ್ತಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಅವರು ಮಂಗಳೂರಿಗೆ ಆಗಮಿಸಿದಾಗ ಅವರಿಗೆ ಜೀರೋ ಟ್ರಾಫಿಕ್ ಒದಗಿಸಲಾಗಿತ್ತು. ಇದರಿಂದ ಕೊಟ್ಟಾರ ಚೌಕಿಯಿಂದ ಆರಂಭಗೊಂಡು ಕುಳಾಯಿ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆ್ಯಂಬುಲೆನ್ಸ್ ಗಳು ಕೂಡ ಇದರಲ್ಲಿ ಸಿಕ್ಕಿ ಹಾಕಿಕೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು