ಇತ್ತೀಚಿನ ಸುದ್ದಿ
ಅಥಣಿ ತಾಲೂಕು ಮಟ್ಟದ ಅಥ್ಲೆಟಿಕ್ಸ್: ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿ 800 ಮೀಟರ್ ಓಟದಲ್ಲಿ ಪ್ರಥಮ
22/10/2024, 19:47
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಅಥಣಿಯ ಎಸ್ ಎಂಎಸ್ ಕಾಲೇಜ ಮೈಧಾನದಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿಯಾದ ಸಾಗರ ಮಡಿವಾಳ 800 ಮೀಟರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈತನಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಜಿ. ಹತ್ತಿ ಹಾಗೂ ದೈಹಿಕ ಶಿಕ್ಷಕರಾದ ಎಸ್. ಜಿ. ಗಾಣಿಗೇರ ಮತ್ತು ಶಾಲಾ ಎಲ್ಲ ಸಿಬ್ಬಂದಿ, ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.














