5:26 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ನವಂಬರ್ 10ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

02/11/2024, 17:16

ಸುರತ್ಕಲ್ (reporterkarnataka.com): ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಶ್ರೀ ಡೆವಲಪರ್ಸ್ ಕಟೀಲು ಸಂಸ್ಥೆಯ ಮಾಲಕ ಗಿರೀಶ್ ಎಂ ಶೆಟ್ಟಿ ಕಟೀಲು, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಥಾಣೆ ಬಂಟ್ಸ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಜಗಧೀಶ್ ಶೆಟ್ಟಿ ಪೆರ್ಮುದೆ, ಚಲನ‌ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ ಲೋಕಯ್ಯ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್
ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲಕುಮಿ ತಂಡದ ವ್ಯವಸ್ಥಾಪಕ, ರಂಗಸವ್ಯಸಾಚಿ ನಿರ್ದೇಶಕ, ಸಂಘಟಕ ಕಿಶೋರ್ ಡಿ ಶೆಟ್ಟಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಬಳಿಕ ಕಲಾವಿದರಿಂದ ಗಾನ ಲಹರಿ ಮತ್ತು ಶ್ರೀ ಲಲಿತೆ ನಾಟಕ ತಂಡದಿಂದ “ಶನಿ ಮಹಾತ್ಮೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಚಾವಡಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು