7:53 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಪಾಣೆಮಂಗಳೂರಿನಲ್ಲಿ ರಾಜ್ಯೋತ್ಸವ ಆಚರಣೆ: ಜಯಾನಂದ ಪೆರಾಜೆಗೆ ಗೌರವ ಪುರಸ್ಕಾರ

03/11/2024, 11:43

ಬಂಟ್ವಾಳ(reporterkarnataka.com): ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡಿ, ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಮಾತನಾಡಿ ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡದ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳ ಸಾಧನೆಯನ್ನು ಪರಿಚಯಿಸಿದರು. ಮೂಲಕ ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾ ಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಸ್ಮರಣಿಕೆ ನೀಡಿ ಅತಿಥಿಗಳನ್ನು ಗೌರವಿಸಿ ಸನ್ಮಾನ ಮಾಡಿದರು.
ಶಾಲಾ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್ , ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ, ಕನ್ನಡ ರಾಜ್ಯೋತ್ಸವದ ಸಂದೇಶಗಳನ್ನು ತಿಳಿದರು. ನವ್ಯ ಬಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಕವಯಿತ್ರಿ ಸುಧಾ ನಾಗೇಶ್ , ಶಾಲಾ ನಾಯಕ ಮನ್ವಿತ್ ಸಿ. ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ ಸ್ವಾಗತಿಸಿ,ಕನ್ನಡ ಭಾಷಾ ಆಧ್ಯಾಪಕ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಶೈಮಾ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದವಿತ್ತರು. ಅಬ್ದುಲ್ ರಾಝಿಕ್ ನಿರೂಪಿಸಿದರು..

ಇತ್ತೀಚಿನ ಸುದ್ದಿ

ಜಾಹೀರಾತು