ಇತ್ತೀಚಿನ ಸುದ್ದಿ
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿ
27/11/2024, 23:02
ನವದೆಹಲಿ(reporterkarnataka.com): ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ನವದೆಹಲಿಯ ಕೃಷಿ ಭವನ ದಲ್ಲಿ ಭೇಟಿಯಾದ ಕರಾವಳಿಯ ಸಂಸದರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವಿ ಮಾಡಿದರು.
ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ , ಕ್ಯಾಪ್ಟನ್ ಬ್ರಿಜೇಶ್ ಚೌಟ ಹಿರಿಯರಾದ ಹೊಸ ಬಾಲೆ ಮಂಜಪ್ಪ ಮುಂತಾದವರಿದ್ದರು.














