8:44 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ರಸ್ತೆ ತಡೆ ಯತ್ನ: ಡಿವೈಎಫ್ಐ ಕಾರ್ಯಕರ್ತರ ಬಂಧನ

28/11/2024, 20:47

ಮಂಗಳೂರು(reporterkarnataka.com): ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ಇಂದು ನಗರದ ರಾವ್ ಆಂಡ್ ರಾವ್ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಯಿತು. ಕಮೀಷನರ್ ಅಗ್ರವಾಲ್ ಹಟಾವೋ ಮಂಗಳೂರು ಭಚಾವೋ ಎಂದು ಘೋಷಣೆಗಳನ್ನು ಕೂಗಿ ರಸ್ತೆ ತಡೆ ನಡೆಸಲು ಮುಂದಾದ ಡಿವೈಎಫ್ಐ ಕಾರ್ಯಕರ್ತರನ್ನು ಅಪಾರ ಸಂಖ್ಯೆಯಲ್ಲಿ ನಿಯೋಜಿಸಿದ್ದ ಪೊಲೀಸರು ತಡೆಯಲು ಯತ್ನಿಸಿದರು ಡಿವೈಎಫ್ಐ ಕಾರ್ಯಕರ್ತರನ್ನು ಬಂಧಿಸುವ ವೇಳೆ ಪೊಲೀಸರ ನಡುವೆ ತಿಕ್ಕಾಟ ನಡೆಯಿತು.


ಸುಮಾರು 50ಕ್ಕೂ ಮಿಕ್ಕಿ ಡಿವೈಎಫ್ಐ ನಾಯಕರುಗಳ ಸಹಿತ ಕಾರ್ಯಕರ್ತರನ್ನು ಬಂಧಿಸಿದರು.
ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡುತ್ತಾ ಪೊಲೀಸ್ ಆಯುಕ್ತರಾದ ಅಗ್ರವಾಲ್ ನನ್ನು ನಿಯೋಜಿಸಿದ್ದು ಅಕ್ರಮಗಳನ್ನು ನಿಯಂತ್ರಿಸಲು ಹೊರತು ಹೋರಾಟಗಾರರನ್ನು ನಿಯಂತ್ರಿಸಲಲ್ಲ. ನಗರದಲ್ಲಿ ಮಟ್ಕಾ, ವೇಶ್ಯಾವಾಟಿಕೆ, ಇಸ್ಪೀಟ್ ಕ್ಲಬ್, ಮರಳುಗಾರಿಕೆ ಸಹಿತ ಅಕ್ರಮ ದಂಧೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಈ ಬಗ್ಗೆ ಕ್ರಮಕೈಗೊಳ್ಳದ ನಿಯಂತ್ರಿಸಲಾಗದ ಕಮೀಷನರ್ ಜನಪರವಾಗಿ ನಡೆಯುವ ಚಳುವಳಿಗಳನ್ನು, ಹೋರಾಟಗಾರರನ್ನು ನಿಯಂತ್ರಿಸುವುದು ನೋಡಿದರೆ ಇವರು ಯಾರ ಪರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಂಬುದು ಸ್ಪಷ್ಟವಾಗುತ್ತಿದೆ. ಇಂತಹ ಕಮೀಷನರ್ ಮಂಗಳೂರು ನಗರಕ್ಕೆ ಕಪ್ಪು ಚುಕ್ಕೆ ಸರಕಾರ ಈ ಕೂಡಲೇ ಕಮೀಷನರ್ ಅನುಪಮ್ ಅಗ್ರವಾಲ್ ನನ್ನು ವರ್ಗಾಹಿಸಬೇಕು. ಇಲ್ಲದೇ ಹೋದಲ್ಲಿ ಡಿವೈಎಫ್ಐ ಹೋರಾಟ ತೀವೃಗೊಳ್ಳಲಿದೆ ಎಂದರು.
ಡಿವೈಎಫ್ಐ ದ.ಕ ಜಿಲ್ಲಾಧಕ್ಷರಾದ ಬಿ.ಕೆ. ಇಮ್ತಿಯಾಜ್ ಮಾತನಾಡುತ್ತಾ ಕಮಿಷನರ್ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗೆ ಕಪ್ಪುಬಾವುಟ ಪ್ರದರ್ಶನ ಕೈಗೊಳ್ಳಲಿದ್ದು ಸರಕಾರ ಈ ಕೂಡಲೇ ಪೊಲೀಸ್ ಕಮಿಷನರನ್ನು ವರ್ಗಾಹಿಸಬೇಕು. ಇಲ್ಲದೇ ಹೋದಲ್ಲಿ ಹೋರಾಟ ತೀವ್ರಗೊಳಿಸಲಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ಕೋಶಾಧಿಕಾರಿ ಮನೋಜ್ ವಾಮಂಜೂರು, ಡಿವೈಎಫ್ಐ ಜಿಲ್ಲಾ ಮುಖಂಡರಾದ ನವೀನ್‌ ಕೊಂಚಾಡಿ, ರಿಜ್ವಾನ್ ಹರೇಕಳ, ನಿತಿನ್ ಕುತ್ತಾರ್, ಸುನೀಲ್ ತೇವುಲ, ಮಾಧುರಿ ಬೋಳಾರ, ಜಗದೀಶ್ ಬಜಾಲ್, ತಯ್ಯೂಬ್ ಬೆಂಗರೆ, ಯೋಗೀಶ್ ಜಪ್ಪಿನಮೊಗರು, ರಫೀಕ್ ಹರೇಕಳ, ಮಹಾಬಲ ದೆಪ್ಪೆಲಿಮಾರ್, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಪ್ರಮಿಳಾ ದೇವಾಡಿಗ, ಅಸುಂತ ಡಿಸೋಜ, ಯೋಗಿತಾ, ಅಶ್ರಫ್ ಹರೇಕಳ, ನೌಶದ್ ಬೆಂಗರೆ, ಹನೀಫ್ ಬೆಂಗರೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು