3:46 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ

23/01/2025, 22:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆ ಜನಜಾಗೃತಿ ಯಾತ್ರೆ ಎಂದೆ ಪ್ರಸಿದ್ಧಿ ಪಡೆದಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜ‌.26 ರಿಂದ 31ರವರೆಗೆ 10 ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸ್ವಾನಿದ್ಯದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಶಿವಕುಮಾರ್ ಹಾಗೂ ಮಹಾದಾಸೋಹದ ಮುಖ್ಯಸ್ಥರಾದ ಬೊಕ್ಕಳ್ಳಿ ಸುಬ್ಬಪ್ಪ ತಿಳಿಸಿದ್ದಾರೆ.
ಇಂದು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಜ.26ರಂದು ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯಾಗಲಿದ್ದು
ಆದಿ ಚುಂಚನಗಿರಿ ಶ್ರಿ ನಿರ್ಮಲಾನಂದನಾಥ ಶ್ರೀಗಳು, ಸುತ್ತೂರು ಮಠದ ಶ್ರೀ ದೇಶೀಕೇಂದ್ರ ಶ್ರೀಗಳ ದಿವ್ಯ ಸಾನಿದ್ಯದೊಂದಿಗೆ ಹಲವು ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಜಾತ್ರ ಮಹೋತ್ಸಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.


ಜ.27 ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ.
155 ಜೋಡಿಗಳಿಗೆ ಸಾಮೂಹಿಕ ವಿವಾಹ ನಡೆಯಲಿದೆ
ಇದು ವರೆಗೆ ಶ್ರೀಕ್ಷೇತ್ರದಲ್ಲಿ 3700 ಜೋಡಿಗಳಿಗೆ ವಿವಾಹವಾಗಿವೆ.
ಜ.28 ರಂದು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ರಥೋತ್ಸವ, ವೀರಭದ್ರೇಶ್ವರ ಕೊಂಡೋತ್ಸವ.
29 ರಂದು ಶ್ರೀ ಮಹದೇಶ್ವರ ಕೊಂಡೋತ್ಸವ, ಹಾಗೂ ಲಕ್ಷ ದೀಪೋತ್ಸವ,30ರಂದು ತಪ್ಪೋತ್ಸವ,31 ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಸಂಪನ್ನ. ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸದಲ್ಲಿ ಭಜನಾ ಮೇಳ, ಧನಗಳ ಜಾತ್ರೆ, ವಸ್ತು ಪ್ರದರ್ಶನ, ಕೃಷಿಮೇಳ, ಚಿತ್ರಸಂತೆ, ಕುಸ್ತಿ ಪಂದ್ಯಾವಳಿ, ಗ್ರಾಮೀಣ ಜನತೆಗಾಗಿ ದೇಶಿ ಆಟಗಳು, ನಾಟಕ ಪ್ರದರ್ಶನ, ಕಲಾತಂಡಗಳ ಪ್ರದರ್ಶನ, ರಸಪ್ರಶ್ನೆ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳು. ಜರುಗಲಿವೆ ಎಂದರು
ಒಂದು ವಾರಗಳ ಕಾಲ ನಡೆವ ಜಾತ್ರ ಮಹೋತ್ಸವಕ್ಕೆ 15ರಿಂದ 20 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ.
ಆರು ದಿನಗಳ ತ್ರಿಕಾಲ ಮಹಾ ದಾಸೋಹಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಉಗ್ರಾಣದಲ್ಲಿ ಈಗಾಗಲೇ
1 ಸಾವಿರ ಕ್ವಿಂಟಾಲ್ ಅಕ್ಕಿ,250 ಕ್ವಿಂಟಾಲ್ ಬೇಳೆ,200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆ.ಜಿ ತುಪ್ಪ ಸೇರಿಸಿ ಎಲ್ಲಾ ಅಡುಗೆ ದಾಸ್ತಾನು ಸಂಗ್ರಹ ಮಾಡಲಾಗಿದೆ
ಸುದ್ದಿ ಗೋಷ್ಠಿ ಮೂಲಕ ಜಾತ್ರಾ ಮಹೋತ್ಸದ ಸಂಪೂರ್ಣ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಮತ್ತೊಬ್ಬ ಕಾರ್ಯದರ್ಶಿ ಉದಯಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು