3:49 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಡ್ಯಾರು ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಮಾ.1-14ರ ವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ

28/01/2025, 22:42

ಮಂಗಳೂರು(reporterkarnataka.com): ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 14ರವರೆಗೆ ತನಕ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯ ಹೇಳಿದರು.
ಅವರು ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಯೋಗಿಯೋರ್ವರ ಪ್ರೇರಣೆಯಿಂದ ಅತ್ತಾವರ ಕೀರ್ತಿಶೇಷ ಸಂಕಪ್ಪ ಪೂಂಜರಿಂದ 400 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಕಾರಣೀಕದ ಶಿವಕ್ಷೇತ್ರ. ಊರ ಪರವೂರ ಭಕ್ತರ ಶ್ರದ್ಧಾಪೂರ್ವಕ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ
ಆಡಳಿತದೊಂದಿಗೆ ಭಕ್ತರನ್ನು ಅನುಗ್ರಹಿಸುವ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದೆ ಎಂದು ಅವರು ನುಡಿದರು.
ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು
ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ ಧ್ವಜಾರೋಹಣ ಆಗಿ ಮಾರ್ಚ್ 14ರ ತನಕ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ವಿವಿಧ ಧಾರ್ಮಿಕ ಕ್ಷೇತ್ರಗಳ ಮಠಾಧೀಶರು ಆಶೀರ್ವಚನ ನೀಡಲಿದ್ದು ಬೇರೆ ಬೇರೆ ಕ್ಷೇತ್ರಗಳ ಸಾಧಕರು, ರಾಜಕೀಯ ನಾಯಕರು, ಕೊಡುಗೈ ದಾನಿಗಳು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟ್ ನ ದಿವಾಕರ ದಾಸ್ ಮಲ್ಲಿ, ದೇವಳದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಎನ್.ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ನಾಯ್ಕ್ ಅಡ್ಯಾರು, ಪುನರ್ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಶೆಟ್ಟಿ ಭಂಡಾರಿಂಜ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧ್ಯಕ್ಷ ದೇವಿಪ್ರಸಾದ್ ಸಾಮಾನಿ ಅಡ್ಯಾರುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ.ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು