7:36 AM Saturday8 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92 ಪರೀಕ್ಷಾ ಕೇಂದ್ರ, 29760 ವಿದ್ಯಾರ್ಥಿಗಳು

20/03/2025, 19:40

ಮಂಗಳೂರು(reporterkarnataka.com): ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.21 ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಈ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯ 521 ಶಾಲೆಗಳ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಒಟ್ಟು 2057 ಪರೀಕ್ಷಾ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಪರೀಕ್ಷೆ ಉಸ್ತುವಾರಿ ವಹಿಸಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ತರಲು 34 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಪರೀಕ್ಷಾ ಕೇಂದ್ರಗಳ ಭದ್ರತೆಗೆ 184 ಪೊಲೀಸರನ್ನು ನಿಯೋಜಿಸಲಾಗಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಪರೀಕ್ಷೆ ಬರೆಯಲಿರುವ 29760 ವಿದ್ಯಾರ್ಥಿಗಳ ಪೈಕಿ 28446 ವಿದ್ಯಾರ್ಥಿಗಳು ಮೊದಲನೇ ಬಾರಿಗೆ ಪರೀಕ್ಷೆ ಬರೆಯುತ್ತಿದ್ದಾರೆ. 831 ಮಂದಿ ಖಾಸಗಿಯಾಗಿ , 259 ಮಂದಿ ಪುನರಾವರ್ತಿತ ಹಾಗೂ 217 ಮಂದಿ ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಹೊಸ ವಿದ್ಯಾರ್ಥಿಗಳ ಪೈಕಿ 14735 ಹುಡುಗರು ಹಾಗೂ 13711 ಹುಡುಗಿಯರು ಪರೀಕ್ಷೆ ಬರೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 8,892 ಸರಕಾರಿ ಶಾಲಾ ವಿದ್ಯಾರ್ಥಿಗಳು, 7864 ಅನುದಾನಿತ ಶಾಲಾ ವಿದ್ಯಾರ್ಥಿಗಳು ಹಾಗೂ 11690 ಅನುದಾನ ರಹಿತ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರಿಶಿಷ್ಟ ಜಾತಿಯ 2475, ಪರಿಶಿಷ್ಟ ಪಂಗಡದ 1240, ಹಿಂದುಳಿದ ವರ್ಗಗಳ 23798 ಹಾಗೂ 933 ಸಾಮಾನ್ಯ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿಟಿವಿ ಅಳವಡಿಸಲಾಗಿದೆ. ಇದಕ್ಕಾಗಿ 1678 ಸಿಸಿ ಕ್ಯಾಮೆರಾಗಳನ್ನು 1332 ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಲಯವಾರು ಅಭ್ಯರ್ಥಿಗಳ ವಿವರ:
ಬಂಟ್ವಾಳ-6007, ಬೆಳ್ತಂಗಡಿ-4204, ಮಂಗಳೂರು ಉತ್ತರ-5443, ಮಂಗಳೂರು ದಕ್ಷಿಣ-5182, ಮೂಡಬಿದ್ರೆ- 2006, ಪುತ್ತೂರು- 4926, ಸುಳ್ಯ- 1992.
ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 6007 ವಿದ್ಯಾರ್ಥಿಗಳು ಹಾಗೂ ಸುಳ್ಯ ತಾಲೂಕಿನಲ್ಲಿ ಅತಿ ಕಡಿಮೆ 1992 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು