4:00 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ ಸಚಿವ ಚಲುವರಾಯಸ್ವಾಮಿ ಸೂಚನೆ

17/04/2025, 15:52

ಬೆಂಗಳೂರು (reporterkarnataka.com): ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.
ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು ಅಭಿನಂದಾನಾರ್ಹವಾಗಿದೆ ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಸಿದರು.
ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಅವರು ಸಲಹೆ ನೀಡಿದರು.
ಕರ್ನಾಟಕವನ್ನು ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿಹೊಂದಲಾಗಿದೆ
ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ.
ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ.ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದರು.
ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ ಪೂರೈಕೆ, ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.
ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್ ಅವರು ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.
ಜಲಾನಯನ ಇಲಾಖೆ ಆಯುಕ್ತರಾದ ಮಹೇಶ್ ಶಿರೂರು, ನಿರ್ದೇಶಕರಾದ ಭಂಥನಾಳ, ಕೃಷಿ ನಿರ್ದೇಶಕರಾದ ಡಾ. ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕರಾದ ವೆಂಕಟರಮನ ರೆಡ್ಡಿ ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು