3:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೇಂದ್ರ ಹಣ ಬಿಡುಗಡೆ ಮಾಡುವಂತೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು, ಸಂಸದರಿಂದ ಪ್ರಧಾನಿ ಭೇಟಿಗೆ ತೀರ್ಮಾನ

03/06/2025, 23:38

ಭದ್ರಾ ಮೇಲ್ದಂಡೆ ಯೋಜನೆಗೆ ಬಾಕಿ ಉಳಿದಿರುವ ಭೂಸ್ವಾಧೀನ ಮಾಡಿಕೊಳ್ಳಲು ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ಪರಿಶೀಲನ ಸಭೆ ವಿಧಾನಸೌಧದಲ್ಲಿ ನಡೆಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು , ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವಿಶ್ವೇಶ್ವರಯ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿದ್ದು 5300 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ಯೋಜನೆ ಪ್ರಗತಿಯಲ್ಲಿದ್ದರೂ ಸಹ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳಾದ ಎಚ್ .ಡಿ .ಕುಮಾರಸ್ವಾಮಿ ,ಶೋಭಾ ಕರಂದ್ಲಾಜೆ ವಿ.ಸೋಮಣ್ಣ ಹಾಗೂ ಪ್ರಹಲ್ಲಾದ್ ಜೋಶಿ ಸೇರಿದಂತೆ ರಾಜ್ಯದ ಎಲ್ಲಾ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ನಿಯೋಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿಗೆ ಕರೆದೊಯ್ದು ಹಣ ಬಿಡುಗಡೆ ಮಾಡುವಂತೆ ಒತ್ತಡ ಹೇರಲು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಈ ಯೋಜನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭೂ ಸ್ವಾಧೀನಾ ಪ್ರಕಿಯೆಗೆ ತೊಡಕು ಉಂಟಾಗಿದ್ದು ಆದಷ್ಟು ಬೇಗ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಟಿ.ಬಿ. ಜಯಚಂದ್ರ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಜಲಸಂಪನ್ಮೂಲ ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುವವರೆಗೂ ಕಾಮಗಾರಿ ವಿಳಂಬ ಮಾಡದೆ ರಾಜ್ಯ ಸರ್ಕಾರವೇ ಹಣ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವೊಲಿಸಬೇಕು ಹಾಗೂ ಗಣಿ ಅಭಿವೃದ್ಧಿ ನಿಧಿಯಲ್ಲಿ( KMDC ) 30,000 ಕೋಟಿ ಹಣವಿದ್ದು ಆ ಹಣವನ್ನು ಈ ಯೋಜನೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಅಭಿವೃದ್ಧಿ ಕಾರ್ಯದರ್ಶಿ ಉಮಾ ಮಹಾದೇವನ್ ಅವರಿಗೆ ಇದೇ ವೇಳೆ ಮನವಿ ಮಾಡಲಾಯಿತು.
ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳು ಗಣಿ ಬಾಧಿತಾ ಪ್ರದೇಶಗಳ ವ್ಯಾಪ್ತಿಗೆ ಬರಲಿದ್ದು ಗಣಿ ಅಭಿವೃದ್ಧಿ ಹಣವನ್ನು ಬಳಸಬಹುದಾಗಿದೆ ಎಂದು ಇದೇ ವೇಳೆ ಜಯಚಂದ್ರ ಅವರು ಉಮಾ ಮಹಾದೇವನ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಭದ್ರಾ ಮೇಲ್ದಂಡೆ ಯೋಜನೆಯ ಸಂಪೂರ್ಣ ಕಾಮಗಾರಿ ವಿವರಗಳನ್ನು ಡ್ರೋನ್ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಛಾಯಾಚಿತ್ರ ಹಾಗೂ ವಿಡಿಯೋ ಮಾಡಿ ಮುಖ್ಯಮಂತ್ರಿ ಅವರಿಗೆ ತೋರಿಸಬೇಕು ಎಂದು ಇದೇ ವೇಳೆ ಗೌರವ್ ಗುಪ್ತ ಅವರು ಜಲಸಂಪನ್ಮೂಲ ಅಧಿಕಾರಿಗಳಿಗೆ ಹೇಳಿದರು .
ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೆಲವು ಮಾಹಿತಿಯನ್ನು ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ಆದಷ್ಟು ಬೇಗ ಆ ಪತ್ರಕ್ಕೆ ಸೂಕ್ತ ಉತ್ತರ ನೀಡಲು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು..
ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು ,ಚಿತ್ರದುರ್ಗ ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ. 2,25,515 ಹೆಕ್ಟೇರ್ ಭೂಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ನೀರು ತುಂಬಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 29 .90 ಟಿಎಂಸಿ ನೀರು ದೊರೆಯಲಿದೆ.2028 ರ ವೇಳೆಗೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮುಗಿಸಲು ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು