4:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

04/06/2025, 23:53

ಬೆಂಗಳೂರು(reporterkarnataka.com): ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಖದ ಸಂಗತಿ, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಯಾವುದೇ ಪೂರ್ವ ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ.
ಹಿಂದೆ ವಿಶ್ವ ಕಪ್ ಮತ್ತು ಇತರ ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌ ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ.
ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್ ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ ಪೊಲಿಸರು ಮತ್ರು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು