9:12 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಅಕ್ಟೋಬರ್‌, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

03/07/2025, 12:42

ಬೆಂಗಳೂರು(reporterkarnataka.com):ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೇ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು.
2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಅವರು ನುಡಿದರು.

*ಬಿಜೆಪಿ ಹೋರಾಟಕ್ಕೆ ಜಯ:* ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ ಎಂದರು.
ಆರ್‌ಎಸ್‌ಎಸ್‌ ನಿಷೇಧ ಮಾಡಿದರೆ, ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತನ್ನು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಬಗ್ಗೆ ಮಾತನಾಡುವಾಗ ಸ್ವಲ್ಪ ಅರಿವು ಇರಬೇಕು. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು