3:53 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊಡಗು ಗಡಿ ಪ್ರದೇಶದಲ್ಲಿ ಭಾರಿ ಮಳೆ: ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ

18/07/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ.


ಬೆಳಗಾಂನ ಸಿಂದೋಗಿನಿಂದ ರಬ್ಬರ್ ಪ್ಲಾಂಟೇಷನ್ ನಲ್ಲಿ ಹಿಟಾಚಿ ಕೆಲಸಕ್ಕೆ ಆಗಮಿಸಿದ್ದ ತಂಡಲ್ಲಿ ಇದ್ದ ಸಹಾಯಕನಾಗಿದ್ದ ದುರ್ಗಪ್ಪ ಮಾದರ (19) ಊಟ ತರಲೆಂದು ಸೇತುವೆ ದಾಟಿ ಕರಿಕೆಗೆ ಬೈಕ್ ನಲ್ಲಿ ತೆರಳಿದ್ದ ಎನ್ನಲಾಗಿದೆ. ಹಲವು ಸಮಯ ಕಳೆದರು ದುರ್ಗಪ್ಪ ವಾಪಸು ಬರದಿರುವ ಹಿನ್ನೆಲೆಯಲ್ಲಿ ಹಿಟಾಚಿ ಚಾಲಕ ತನ್ನ ಪತ್ನಿಗೆ ಕರೆ ಮಾಡಿದ್ದ್ದು, ದುರ್ಗಪ್ಪ ಬಂದಿಲ್ಲ ಎಂದು ತಿಳಿದು ಬಂದಿದೆ. ಇದೇ ಸಮಯದಲ್ಲಿ ಭಾರಿ ಮಳೆಗೆ ಸೇತುವೆ ಮುಳುಗಿದ್ದು, ಸ್ಥಳದಲ್ಲಿ ಬೈಕ್ ನ ಗುರುತುಗಳು ಪತ್ತೆಯಾಗಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನ ಅಗ್ನಿ ಶಾಮಕ ಮತ್ತು NDRF ತಂಡ ಸುಮಾರು 5 ಕಿಲೋಮೀಟರು ವರೆಗೆ ಶೋಧ ಕಾರ್ಯ ನಡೆಸಿದೆ. ಬೆಳಗಾವಿಯಿಂದ ಮೃತನ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಆಕ್ರಂಧನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು