11:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ: ಸುಕ್ಷೇತ್ರ ಇರಕಲ್ ಮಠದಲ್ಲಿ 203ನೇ ಸುಜ್ಞಾನ ಸಂಗಮ ಆಧ್ಯಾತ್ಮಿಕ ಚಿಂತನ ಗೋಷ್ಠಿ

25/07/2025, 00:14

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ
ರಾಯಚೂರು

info.reporterkarnataka@gmail.com

ಜಗದ್ಗುರು ಶ್ರೀ ಶಿವಶಕ್ತಿ ಪೀಠ ಸುಕ್ಷೇತ್ರ ಇರಕಲ್ ಮಠದಲ್ಲಿ ಇಂದು 203ನೇ ಸುಜ್ಞಾನ ಸಂಗಮ ಎಂಬ ಆಧ್ಯಾತ್ಮಿಕ ಚಿಂತನ ಗೋಷ್ಠಿ ನಡೆಯಿತು.
ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಬಸವ ಪ್ರಸಾದ ಶರಣರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಅಭಿಜಿತ್ ಮಾಲಿ ಪಾಟೀಲ್ ಮಸ್ಕಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ, ಶ್ರೀಮಠದ ಶಿಕ್ಷಣ ಪದ್ದತಿಯು ಅತ್ಯುತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಈಗಿನ ಮಕ್ಕಳಲ್ಲಿ ನೀಡುವಂತ ಕಾರ್ಯಾ ಶ್ಲಾಘನೀಯ ಎಂದು ವಿವರಿಸಿದರು. .


ಬೆಳಕು ಸಂಸ್ಥೆಯ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ್ರು ಶ್ರೀಮಠದಲ್ಲಿ ಶೈಕ್ಷಣಿಕವಾಗಿ ಮಕ್ಕಳು ಸಂಸ್ಕಾರಯುತವಾಗಿ ಶಿಕ್ಷಣವನ್ನು ನೀಡುವ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ನಮ್ಮ ಭಾಗದಲ್ಲಿ ದೊಡ್ಡ ಕಾರ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀಜ್ಞಾನಾಕ್ಷಿ ಶಾಲೆಯ ಮಕ್ಕಳಿಂದ ಪ್ರತಿಭಾ ಪ್ರದರ್ಶನ ಹಾಗೂ ವಿಜ್ಞಾನ ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. 203ನೇ ಸುಜ್ಞಾನ ಸಂಗಮ ಕಾರ್ಯಕ್ರಮದ ವೇದಿಕೆಯಲ್ಲಿ ಸುರೇಶ್ (ಕ .ಸಾ.ಪ ಅಧ್ಯಕ್ಷರು), ಸಿರವಾರ ಬಸವರಾಜ್, ಬಂಕಲ್ ದೊಡ್ಡಿ ವಟಗಲ್, ಆದನ ಗೌಡ ಗ್ರಾ. ಪಂ ಸ ವಟಗಲ್, ಸೂಗಪ್ಪ ವಟಗಲ್ ಉಪಸ್ಥಿತರಿದ್ದರು. ವಿಶೇಷವಾಗಿ ಈ ಕಾರ್ಯಕ್ರಮಕ್ಕೆ ಎಲ್ಲಾ ಅತಿಥಿಗಳಿಂದ ಶ್ರೀ ಜ್ಞಾನಾಕ್ಷಿ ವಿದ್ಯಾ ಮಂದಿರ ಶಾಲೆಯ ಪುಟಾಣಿ ಮಕ್ಕಳಿಗೆ ವಾರದ ನಕ್ಷತ್ರಗಳು ಹಾಗೂ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ವಿವಿಧ ಖಾತೆಯ ವಿದ್ಯಾರ್ಥಿಗಳಿಗೆ ಬ್ಯಾಡ್ಜ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ಶ್ರೀಮಠದ ಪೂಜ್ಯರು ತಮ್ಮ ಆರ್ಶೀವಚನದಲ್ಲಿ ಈಗಿನ ವಾತಾವರಣ ಪಾಲಕರ ಮನಸ್ಥಿತಿ ಮಕ್ಕಳ ಮನಸ್ಥಿತಿಯನ್ನು ವಿವರಿಸುತ್ತಾ ಮಕ್ಕಳಿಗೆ ಬೇಕಾಗಿರುವ ಅವಶ್ಯ ಸಂಸ್ಕೃತಿಯನ್ನು ಶ್ರೀಮಠವು ನೀಡುತ್ತಾ ಬಂದಿದೆ. ಕಳೆದ 19 ವರ್ಷಗಳಿಂದ ಶ್ರೀಮಠದಲ್ಲಿ ಸುಜ್ಞಾನ ಸಂಗಮ ಕಾರ್ಯಕ್ರಮ ನಡೆಸಲಾಗುತ್ತಿದ್ದು,
ಈ ಕಾರ್ಯಕ್ರಮದಲ್ಲಿ ಹಲವಾರು ಅತಿಥಿಗಳಿಗೆ ಸಾಧಕರಿಗೆ ಗಣ್ಯಮಾನ್ಯರಿಗೆ ಸನ್ಮಾನಿಸ ಲಾಗಿದ್ದು, ಅವರಿಗೆಲ್ಲ ಈ ವೇದಿಕೆಯು ದಾರಿ ದೀಪವಾಗಿದೆ ಎಂದು ತಮ್ಮ ಆಶೀರ್ವಚನದ ಮೂಲಕ ತಿಳಿಸಿದರು ಶಿವು ಸಾಲಿಮಟ್ಟ ಕಾರ್ಯಕ್ರಮ ನಿರೂಪಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು