6:55 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

31/07/2025, 19:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ.
ದೂರುದಾರ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೋರ್ಟ್ ಮುಂದೆ ಹೇಳಿರುವ ಕಾರಣ ಇದರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ರಚಿಸಿತ್ತು. ದೂರುದಾರ ಈಗಾಗಲೇ ಗುರುತಿಸಿರುವ 13 ಸ್ಪಾಟ್ ಗಳನ್ನು ಎಸ್ಐಟಿ ತಂಡ ಮಾರ್ಕ್ ಮಾಡಿದೆ. ಇವತ್ತು ಅನುಕ್ರಮವಾಗಿ 6ನೇ ಸ್ಪಾಟ್ ನ ಉತ್ಖನನ ನಡೆದಿದೆ. 6ನೇ ಸ್ಪಾಟ್ ನಲ್ಲಿ ಶವ ಹೂತಿಟ್ಟ ಬಗ್ಗೆ
ಮಹತ್ತರವಾದ ಪುರಾವೆಗಳು ಲಭಿಸಿವೆ. ಇದೀಗ ಸಮಾಧಿಗಳ ಉತ್ಖನನ ಕಾರ್ಯ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡನ್ನು ಕಾಡಿನೊಳಗೆ ನಿರ್ಮಿಸಲಾಗಿದೆ. ದೂರುದಾರ ಹೇಳುವ ಎಲ್ಲ ಸ್ಪಾಟ್ ಗಳಲ್ಲಿ ಅಗೆಯುವ ಅನಿವಾರ್ಯತೆ ಎಸ್ಐಟಿ ತಂಡಕ್ಕಿರುವ ಹಿನ್ನೆಲೆಯಲ್ಲಿ ಮಳೆ- ಬಿಸಿಲಿನಿಂದ ಕೊಂಚ ರಕ್ಷಣೆ ಪಡೆಯಲು ತಾತ್ಕಾಲಿಕ
ನಿರ್ಮಾಣದ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು