11:29 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ: ಶೈಕ್ಷಣಿಕ ಪ್ರಗತಿಯ ಇತಿಹಾಸಿಕ ಸಾಧನೆ

07/08/2025, 21:07

ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಅಸೋಸಿಯೇಷನ್‌ನ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸಂಸ್ಥೆ ಕೆನರಾ ಇಂಜಿನಿಯರಿಂಗ್ ಕಾಲೇಜು (CEC), ತನ್ನ ಶೈಕ್ಷಣಿಕ ಪ್ರವಾಸದಲ್ಲಿ ಮತ್ತೊಂದು ಇತಿಹಾಸಾತ್ಮಕ ಸಾಧನೆ ಸಾಧಿಸಿದೆ. ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomous Status) ಲಭಿಸಿದ್ದು, ಇದು ಭವಿಷ್ಯದ ಉದ್ಯೋಗಯೋಗ್ಯ ವಿದ್ಯಾರ್ಥಿಗಳನ್ನು ರೂಪಿಸಲು,ಹಾಗೂ ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಬದ್ಧತೆಯನ್ನು ಹೆಚ್ಚಿಸುತ್ತದೆ.


ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇದರ ಶೈಕ್ಷಣಿಕ ಗುಣಮಟ್ಟ, ಮೂಲಸೌಕರ್ಯ, ಆಡಳಿತ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಸಾಧನೆಗಳನ್ನು ಪರಿಶೀಲಿಸಿ ಈ ಮಾನ್ಯತೆಯನ್ನು ಮಂಜೂರು ಮಾಡಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿಯ ಶಿಫಾರಸು ಮೇರೆಗೆ ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ಈ ಸ್ಥಾನಮಾನ ಲಭಿಸಿತು.
ಸ್ವಾಯತ್ತ ಸ್ಥಾನಮಾನದಿಂದಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜು ಈಗ ಮುಂದೆ
ಸ್ವತಂತ್ರವಾಗಿ ಪಠ್ಯಕ್ರಮ ರೂಪಿಸಿ ಜಾರಿಗೆ ತರಲು,
ಕೈಗಾರಿಕಾ ಅಗತ್ಯಗಳಿಗೆ ತಕ್ಕಂತೆ ಹೊಸ ಕೋರ್ಸ್‌ಗಳನ್ನು ಪರಿಚಯಿಸಲು,
ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗುತ್ತದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ,ಬೆಳಗಾವಿಗೆ ಸಂಬಂಧಿತವಿರುವುದನ್ನು ಮುಂದುವರಿಸುತ್ತಲೇ, ಕಾಲೇಜು ಈಗ ಶೈಕ್ಷಣಿಕವಾಗಿ ಇನ್ನಷ್ಟು ಚುರುಕಾಗಿದ್ದು, ತಂತ್ರಜ್ಞಾನ ಹಾಗೂ ಉದ್ಯಮ ಲೋಕದ ಬೇಡಿಕೆಗೆ ತಕ್ಕಂತೆ ಶಿಕ್ಷಣ ನೀಡಲು ಸದಾ ಸಜ್ಜಾಗಿದೆ.
ಈ ಮಹತ್ವದ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ, ನಾವೀನ್ಯತೆ ಹಾಗೂ ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯ ಮೇಲಿನ ನಂಬಿಕೆಗೆ ಸಾಕ್ಷಿಯಾಗಿದೆ. ಕಾಲಕ್ರಮೇಣ CEC ವಿವಿಧ ಗುಣಮಟ್ಟದ ಮಾನ್ಯತೆಗಳನ್ನು ಸಂಪಾದಿಸಿದೆ:

*NAAC ‘A’ ಶ್ರೇಣಿ ಮೌಲ್ಯಮಾಪನ:*
NBA ಮಾನ್ಯತೆ – CSE, ISE ಮತ್ತು ECE ವಿಭಾಗಗಳಿಗೆ (01.07.2025 ರಿಂದ 30.06.2028 ರವರೆಗೆ ಮಾನ್ಯತೆ)

ISO 9001:2015 & ISO 21001:2018 ಪ್ರಮಾಣಪತ್ರ

Career360 ಸಂಸ್ಥೆಯಿಂದ Teaching-Learning ಪ್ರಕ್ರಿಯೆಗೆ AAA ಮೌಲ್ಯಮಾಪನ

Institution’s Innovation Council (IIC) ನಿಂದ (Triple Star) ಮಾನ್ಯತೆ

ಈ ಸಾಧನೆಗೆ ಕಾರಣರಾದ ಕಾಲೇಜಿನ ನಿರ್ವಹಣಾ ಮಂಡಳಿ, ಪ್ರಾಚಾರ್ಯರು, ಅಧ್ಯಾಪಕರು, ಸಿಬ್ಬಂದಿಗಳು ಹಾಗೂ ಎಲ್ಲಾ ಪಾಲುದಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು