3:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

10/08/2025, 13:32

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್‌ ಸಿಗ್ನಲ್‌ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು.


ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್ ವಂದೇ ಭಾರತ್ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಅಮೃತ್‍ಸರ್ ದಿಂದ ಶ್ರ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರಿಂದ-ಬೆಳಗಾವಿಗೆ ಕೇವಲ 8.5 ಗಂಟೆಗಳಲ್ಲಿ 611 ಕಿ.ಮೀ ದೂರವನ್ನು ಕ್ರಮಿಸಲಿದೆ. ಹಾಲಿ ಇರುವ ರೈಲಿನ ಸೇವೆಗಳಿಗಿಂತ ಬೆಂಗಳೂರಿನಿಂದ ಬೆಳಗಾವಿಗೆ 1 ಗಂಟೆ 20 ನಿಮಿಷ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಸುಮಾರು 1 ಗಂಟೆ 40 ನಿಮಿಷ ಸಮಯ ಉಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು