ಇತ್ತೀಚಿನ ಸುದ್ದಿ
ಕೋವಿಡ್ ನಿಯಂತ್ರಣಕ್ಕೆ ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
23/05/2021, 08:54
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ಮಸ್ಕಿ ಪ್ರದೇಶದಲ್ಲಿ ಕೋವಿಡ್ ನಿಯಂತ್ರಿಸಲು ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಮಸ್ಕಿ ತಾಲೂಕು ಕೋವಿಡ್ ಮುಕ್ತ ವನ್ನಾಗಿಸಲು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿಸಿ ಹಗಲಿರುಳು ಶ್ರಮಿಸಿ ಮಸ್ಕಿ ತಾಲೂಕನ್ನು ಕೋವಿಡ್ ಮುಕ್ತವನ್ನಾಗಿಸಲು ಶ್ರಮಿಸೋಣ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬಾಬು ರಾಥೋಡ್ ಕರೆ ನೀಡಿದರು.
ತಹಸೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಎಲ್ಲರೂ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದರು.














