6:48 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಎಂದ ಡಿ.ಎಸ್. ಅರುಣ್

11/08/2025, 20:11

ಬೆಂಗಳೂರು (reporterkarnataka.com): ರಾಜ್ಯ ವಿಧಾನ ಮಂಡಲ 156ನೇ ಅಧಿವೇಶನದ ಮೊದಲನೇಯ ದಿನವಾದ ಇಂದು, ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಶಾಸಕರಾದ ಡಿ.ಎಸ್. ಅರುಣ್ ರವರು ಪ್ರಸ್ತಾಪಿಸಿದರು.
ರಾಜ್ಯದ ಧಾರ್ಮಿಕ ಹೆಮ್ಮೆ ಹಾಗೂ ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಯಾವುದೇ ದೃಢವಾದ ಸಾಕ್ಷ್ಯವಿಲ್ಲದೆ ಅನಾಮಿಕ ವ್ಯಕ್ತಿ ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿದರು.
ಇಂತಹ ಸುಳ್ಳು ಹಾಗೂ ಉದ್ದೇಶಪೂರಿತ ಆರೋಪಗಳಿಂದ ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಧರ್ಮ ವಿರೋಧಿ ಶಕ್ತಿಗಳ ಹಳೆಯ ತಂತ್ರ. ಸರ್ಕಾರವು ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಿ, ಆರೋಪದ ಹಿಂದೆ ಇರುವ ನಿಜಸ್ವರೂಪವನ್ನು ತಕ್ಷಣ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರವು ತನಿಖೆಯನ್ನು ತ್ವರಿತಗೊಳಿಸಲು, ಗೃಹ ಸಚಿವರ ಮೂಲಕ ಪ್ರಗತಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಹಾಗೂ ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿ.ಎಸ್.ಅರುಣ್ ರವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು